ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ, ಮಂಗಳೂರು ಹಾಗೂ ಗ್ರಾಮ ಪಂಚಾಯತ್ ಪಡುಪೆರಾರ, ಪ್ರಾಥಮಿಕ ಆರೋಗ್ಯ ಕೇಂದ್ರ, ಬಜಪೆ ವತಿಯಿಂದ ಮೂಡುಪೆರಾರ ಮುಂಡಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರವು ನಡೆಯಿತು.ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಶಿಬಿರಕ್ಕೆ ಇಂದು ಚಾಲನೆ ನೀಡಿದರು.
ಈ ಸಂದರ್ಭ ಪಡು ಪೆರಾರ ಗ್ರಾ.ಪಂ ಅಧ್ಯಕ್ಷೆ ಅಮಿತಾ ಶೆಟ್ಟಿ ಪೆರಾರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ, ಗಣ್ಯಾತೀಗಣ್ಯರುಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
31/08/2021 06:08 pm