ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ವಾಮದಪದವು ಕಾಲೇಜಲ್ಲಿ ಪತ್ರಕರ್ತರ ಸಂಘದಿಂದ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಸಾಮಾಜಿಕ ಜಾಲಾತಾಣಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಬಳಕೆಯಾಗಬೇಕೆ ವಿನಃ ಬದುಕಿಗೆ ಮಾರಕವಾಗ ಬಾರದು, ಸಾಮಾಜಿಕ ಜಾಲಾತಾಣಗಳನ್ನು ಬಳಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸದಾ ಎಚ್ಚರದಿಂದಿರಬೇಕು ಎಂದು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ.ವಿ. ಹೇಳಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ, ಪ್ರೆಸ್ ಕ್ಲಬ್ ಬಿ.ಸಿ.ರೋಡ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಮಾಜಿಕ ಜಾಲತಾಣ- ಸಾಧಕ ಬಾಧಕಗಳು ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಹರಿಪ್ರಸಾದ್ ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯಾದವ ಕುಲಾಲ್, ಕೋಶಾಧಿಕಾರಿ ವೆಂಕಟೇಶ್ ಬಂಟ್ವಾಳ ಉಪಸ್ಥಿತರಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಸದಸ್ಯ ರತ್ನದೇವ್ ಪೂಂಜಾಲಕಟ್ಟೆ ವಿಜೇತರ ವಿವರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರೊನಾಲ್ಡ್ ವಂದಿಸಿದರು. ವಿದ್ಯಾರ್ಥಿನಿ ಶ್ವೇತಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

Edited By : PublicNext Desk
Kshetra Samachara

Kshetra Samachara

24/09/2021 06:53 pm

Cinque Terre

2.46 K

Cinque Terre

0

ಸಂಬಂಧಿತ ಸುದ್ದಿ