ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ಚಾಳ: 27ರಂದು ಬಿ.ಸಿ.ರೋಡಿನಲ್ಲಿ ಹೆದ್ದಾರಿ ತಡೆ, ಪ್ರತಿಭಟನೆ

ಬಂಟ್ಚಾಳ: ಕೇಂದ್ರ ಸರ್ಕಾರ ರೈತ, ದಲಿತ, ಕಾರ್ಮಿಕ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೆ.27ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಜಿಲ್ಲಾ ಮಟ್ಟದ ಹೆದ್ದಾರಿ ತಡೆ ಪ್ರತಿಭಟನೆ ನಡೆಯಲಿದೆ.

ಈ ವಿಷಯವನ್ನು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ತಿಳಿಸಿದರು.

ರಾಷ್ಟ್ರದಾದ್ಯಂತ ಈಗಾಗಲೇ ಭಾರತ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಮಿ‌ನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ ನಡೆಯಲಿದೆ. ಇದು ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿದ್ದು ವಿವಿಧ ಸಂಘಟನೆಗಳ ಬೆಂಬಲ ಇದೆ ಎಂದವರು ಮಾಹಿತಿ ನೀಡಿದರು. ರೈತರ ಹೋರಾಟದ ಕುರಿತು ಗೇಲಿ ಮಾಡಲಾಗುತ್ತಿದೆ ಎಂದು ಸಿಐಟಿಯು ಮುಖಂಡ ರಾಮಣ್ಣ ವಿಟ್ಲ ಈ ಸಂದರ್ಭ ಹೇಳಿದರು.

Edited By : PublicNext Desk
Kshetra Samachara

Kshetra Samachara

24/09/2021 06:57 pm

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ