ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವತಿಯಿಂದ ಬೃಹತ್ ಸ್ವಚ್ಛತೆ ಜಾಗೃತಿ ಜಾಥಾ

ಮುಲ್ಕಿ: ದಕ್ಷಿಣಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಮತ್ತು ಮುಲ್ಕಿ ನಗರ ಪಂಚಾಯತ್ ಜಂಟಿ ಆಶ್ರಯದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆ (ನಗರ) ಆಜಾದಿ ಕಾ ಅಮೃತ ಮಹೋತ್ಸವದ ಅಡಿ "ಸಸಿ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸ್ವಚ್ಛತೆಯ ಬೃಹತ್ ಜಾಥಾ" ನಡೆಯಿತು.

ಕಾರ್ಯಕ್ರಮ ವನ್ನು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಶ್ ಶೆಟ್ಟಿ ಉದ್ಘಾಟಿಸಿದರು

ಈ ಸಂದರ್ಭ ನಗರಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ಸ್ವಚ್ಛತೆ ಮೂಲಕ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ಹಿಮ್ಮೆಟ್ಟಿಸುವ ಕೆಲಸವಾಗಿದ್ದು ನಾಗರಿಕರು ಮತ್ತಷ್ಟು ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಲು ಮನವಿ ಮಾಡಿದರು.

ನ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್, ಸದಸ್ಯರಾದ ಪುತ್ತುಬಾವ, ರಾಧಿಕಾ ಯಾದವ ಕೋಟ್ಯಾನ್, ದಯಾವತಿ ಅಂಚನ್, ಮತ್ತಿತರರು ಉಪಸ್ಥಿತರಿದ್ದರು.

ಬೃಹತ್ ಸ್ವಚ್ಛತಾ ಆಂದೋಲನದ ಜಾಥಾ ಮುಲ್ಕಿ ನಗರ ಪಂಚಾಯಿತಿ ನಿಂದ ಕಾರ್ನಾಡು ವರೆಗೆ ನಡೆಯಿತು.

ಜಾಥಾದಲ್ಲಿ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ನಗರ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

02/10/2021 05:49 pm

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ