ಬಂಟ್ವಾಳ : ಬಂಟ್ವಾಳ ತಾಲೂಕಿನ ನಲ್ಕೆಮಾರಿನ ದ.ಕ.ಜಿ.ಪ. ಉನ್ನತೀಕರಿಸಿದ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾರಂಭ ವಿಶಿಷ್ಟವಾಗಿ ನಡೆಯಿತು. 6ನೇಯಿಂದ 8ನೇ ತರಗತಿಯ ವಿದ್ಯಾರ್ಥಿಗಳೇ ಶಾಲಾಂಭದ ಪೂರ್ವ ತಯಾರಿ ನಡೆಸಿದ್ದರು.
ಬ್ಯಾಂಡ್ ವಾದ್ಯಗಳೊಂದಿಗೆ ೧ರಿಂದ ೫ನೇ ತರಗತಿ ವರೆಗಿನ ಮಕ್ಕಳನ್ನು ಮೆರವಣಿಗೆಯ ಮುಖಾಂತರ ಶಾಲಾ ಸಭಾಂಗಣಕ್ಕೆ ಕರೆದುಕೊಂಡು ಬರಲಾಯಿತು. ಶಾಲಾಬಿವೃದ್ಧಿ ಸಮಿತಿ ಅಧ್ಯಕ್ಷ ವಿಜಯ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಹೂ ಹಾಗೂ ಬಲೂನು ನೀಡಿ ಸ್ವಾಗತಿಸಿ ಆರತಿ ಎತ್ತಿ ಕುಂಕುಮ ಹಣೆಗಿಟ್ಟು ಸಭಾಂಗಣದಲ್ಲಿ ಕುಳ್ಳಿರಿಸಿದರು. ಶಿಕ್ಷಕಿ ರೇಖಾ ಮಕ್ಕಳ ಹಾಡು ಹಾಡುವ ಮೂಲಕ ಸಭಾರಂಭ ಆರಂಭವಾಯಿತು. ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷ ಸುನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಮುಖ್ಯೋಪಾಧ್ಯಾಯಿನಿ ಜ್ಯೋತಿ, ಸ್ಥಳೀಯ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ಶಶಿಕಲಾ ಧನ್ಯವಾದ ಮಾಡಿದರು. ಶಿಕ್ಷಕಿ ರೇಖಾ ರಾವ್ ಕಾರ್ಯಕ್ರಮ ನಿರೂಪಿಸಿದರು.
Kshetra Samachara
25/10/2021 08:38 pm