ಬಂಟ್ವಾಳ: ಕರ್ನಾಟಕ ಸರಕಾರದ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆಯಂತೆ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಲಕ್ಷ ಕಂಠಗಳ ಕನ್ನಡ ಗೀತ ಗಾಯನವು ಗುರುವಾರ ನಡೆಯಿತು.
ಕನ್ನಡಕ್ಕಾಗಿ ನಾವು ಎಂಬ ಅಭಿಯಾನದಡಿಯಲ್ಲಿ ಶಾಲಾ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳ ಸುಮಾರು ೧,೫೦೦ ವಿದ್ಯಾರ್ಥಿಗಳು ಏಕಕಾಲದಲ್ಲಿ ಲಕ್ಷ ಕಂಠಗಳ ಗಾಯನದಲ್ಲಿ ಪಾಲ್ಗೊಂಡರು.
ಜಯ ಭಾರತ ಜನನಿಯ ತನುಜಾತೇ, ಬಾರಿಸು ಕನ್ನಡ ಡಿಂಡಿಮವ, ಜೋಗದಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಲಿ ಹುಟ್ಟಬೇಕು ಈ ಹಾಡುಗಳನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಽಯನ್ನು ಪ್ರೌಢಶಾಲಾ ಕನ್ನಡ ಶಿಕ್ಷಕಿ ಶಾಂತಾ ಎಸ್.ಅವರು ಬೋಽಸಿದರು.
ಪ.ಪೂ.ಕಾಲೇಜು ಪ್ರಾಂಶುಪಾಲೆ ಪುಷ್ಪಲತಾ, ಉಪಪ್ರಾಂಶುಪಾಲ ಉದಯಕುಮಾರ ಬಿ., ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೋನಪ್ಪ, ಪುಂಜಾಲಕಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಚೇತನಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಗಿರೀಶ್ ಅನಿಲಡೆ ಮತ್ತು ಸದಸ್ಯರು,ಶಿಕ್ಷಕರು ಸಿಬಂದಿ ವರ್ಗ ಉಪಸ್ಥಿತರಿದ್ದರು.
ಶಿಕ್ಷಕ ಧರಣೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು.
Kshetra Samachara
28/10/2021 05:59 pm