ಬಜಪೆ:ಆಶಕ್ತ ಕಲಾವಿದರಿಗೆ ಸಹಾಯ ಹಸ್ತ ನೀಡಲು ಹುಟ್ಟಿಕೊಂಡಿರುವ ಸಂಸ್ಥೆ ಯಕ್ಷಧ್ರುವ ಪಟ್ಲಫೌಂಡೇಶನ್.ಅಶಕ್ತ ಕಲವಿದರನ್ನು ಗುರುತಿಸಿ ಸಹಾಯ ಹಸ್ತ ನೀಡುತ್ತ ಬಂದಿರುವ ಪಟ್ಲ ಫೌಂಡೇಶನ್ ನ ಕಾರ್ಯ ಶ್ಲಾಘನೀಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಕಟೀಲು - ಎಕ್ಕಾರು ಘಟಕದ ಅಧ್ಯಕ್ಷ ಗಿರೀಶ್ ಎಂ.ಶೆಟ್ಟಿ ಕಟೀಲು ಹೇಳಿದರು.
ಅವರು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಟೀಲು - ಎಕ್ಕಾರು ಘಟಕದ ಆರನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಈ ಸಂದರ್ಭ ಕಟೀಲು ಯಕ್ಷಗಾನ ಮೇಳದ ನಿವೃತ್ತ ಸಹಾಯಕರಾದ ನೋಣಯ್ಯ ಶೆಟ್ಟಿ ಮುಕ್ಕಾಲ್ದಿ ಮನೆ ಎಕ್ಕಾರು ಇವರನ್ನು ಸಂಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶಶನ್ ಮಂಗಳೂರು ಇದರ ಸ್ಥಾಪಕಾಧ್ಯಕ್ಷ ಯಕ್ಷಧ್ರುವ ಪಟ್ಲಸತೀಶ್ ಶೆಟ್ಟಿ, ಎಕ್ಕಾರು ಕೊಡಮಣೆತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರ ಮನೆ,ಎಕ್ಕಾರು ವಿಜಯ ಯುವ ಸಂಗಮದ ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರು,ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು,ಸಿರಿಕುರಲ್ ರೈತ ಉತ್ಪಾದಕ ಸಂಸ್ಥೆ ಎಕ್ಕಾರು ಇದರ ಅಧ್ಯಕ್ಷ ಸದಾಶಿವ ಶೆಟ್ಟಿ ಮುರ,ಕೊಡೆತ್ತೂರು ಅರಸು ಕುಂಜಿರಾಯ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಕೊಡೆತ್ತೂರು,ಸಿವಿಲ್ ಕಂಟ್ರಾಕ್ಟರ್ ದೊಡ್ಡಯ್ಯ ಮೂಲ್ಯ ಕಟೀಲು,ಉದ್ಯಮಿಗಳಾದ ಉದಯ ಪ್ರಕಾಶ್ ನಾಯಕ್,ಯಾದವ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಎಕ್ಕಾರು ಗುಡ್ಡೆಸಾನದ ಬಳಿಯಲ್ಲಿವಿಶೇಷ ರಂಗಸಜ್ಜಿಕೆಯಲ್ಲಿ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
Kshetra Samachara
17/12/2021 01:01 pm