ನೀರುಮಾರ್ಗ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿಗಳನ್ನು ನೀರುಮಾರ್ಗ ಗ್ರಾಮದ ಸುಬ್ರಹ್ಮಣ್ಯ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ನೀಡಿ ಮಂದಿರ ನಿರ್ಮಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಜೊತೆ ಕೈಜೋಡಿಸಿದ್ದಕ್ಕಾಗಿ ಸಮಿತಿಯವರು ಹರ್ಷ ವ್ಯಕ್ತಪಡಿಸಿದರು.
ಗುರುಗಳ ಶಿಲಾಮೂರ್ತಿಯ ಪ್ರತಿಷ್ಟೆಯ ಶುಭ ದಿನದಂದು ಶ್ರೀ ಕ್ಷೇತ್ರ ಶಿವಗಿರಿಯ ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿಯವರು ಶಾಸಕರಾದ ಡಾ.ಭರತ್ ಶೆಟ್ಟಿಯವರನ್ನು ಸನ್ಮಾನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
Kshetra Samachara
23/01/2022 08:05 pm