ಬಜಪೆ:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಜಿಮಠ ಗ್ರಾಮ ಪಂಚಾಯತ್ ವತಿಯಿಂದ ಗ್ರಂಥಾಲಯ ಹಾಗೂ ಗಂಜಿಮಠ ಬಸ್ ತಂಗುದಾಣ ಮತ್ತು ಕೈಕಂಬ ಬಸ್ಸು ತಂಗುದಾಣದ ಪುಸ್ತಕ ಗೂಡುಗಳನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಯವರು ಉದ್ಘಾಟಿಸಿದರು.
ಈ ಸಂದರ್ಭ ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಉಪಾಧ್ಯಕ್ಷೆ ಕುಮುದಾ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಗಂಜಿಮಠ, ಗ್ರಾಮ ಪಂಚಾಯತ್ ಸದಸ್ಯರು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/01/2022 02:57 pm