ಬಜಪೆ : ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರಿನ ಕುಚ್ಚಿಗುಡ್ಡೆಯಲ್ಲಿ ದಕಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾಮಾಂತರ) ಹಾಗೂ ಗುರುಪುರ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಒಟ್ಟು 15.75 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಪಂಚಾಯತ್ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು.
ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಎ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಶೈಲಾ ಕೆ ಕಾರಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಿಡಿಪಿಒ ಜಿಪಂ ನಿಕಟಪೂರ್ವ ಸದಸ್ಯ ಯು ಪಿ ಇಬ್ರಾಹಿಂ, ಪಂಚಾಯತ್ ಸದಸ್ಯರಾದ ರಿಯಾಝ್, ಅಝ್ಮಿನ್, ಮರಿಯಮ್ಮ, ಜಕಾರಿಯಾ ಸಾಯಿಕ್, ರಾಜೇಶ್ ಸುವರ್ಣ, ಸಚಿನ್ ಅಡಪ, ಚಂಪಾ, ಎಡ್ಲಿನ್ ಡಿ'ಸೋಜ, ಪಂಚಾಯತ್ ಕಾರ್ಯದರ್ಶಿ ಅಶೋಕ್, ಕುಚ್ಚಿಗುಡ್ಡೆ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಉಷಾ, ಮಕ್ಕಳು, ಮಕ್ಕಳ ಪಾಲಕರು ಹಾಗೂ ಮತ್ತಿತರರು ಇದ್ದರು.
ಪಂಚಾಯತ್ ಪಿಡಿಒ ಅಬೂಬಕ್ಕರ್ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Kshetra Samachara
02/02/2022 08:42 pm