ಮೂಡಬಿದ್ರೆ: ನಗರದ ಹೊರವಲಯದ ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಜುನಾಪುರ ದೇವಸ್ಥಾನದ ಬಳಿಯಿಂದ ಅಮಣಿ ರಸ್ತೆವರೆಗೆ 2 ಕೋಟಿ 33 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಯಾಗಲಿರುವ ರಸ್ತೆ ಕಾಮಗಾರಿಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು ಸಂದರ್ಭ ಸ್ಥಳೀಯ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Kshetra Samachara
08/02/2022 07:49 pm