ಬಜಪೆ : ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ-ದೇವುಪೂಂಜ ಜೋಡಿಕರೆ ಕಂಬಳ ಟ್ರಸ್ಟ್ ವತಿಯಿಂದ ನಾಳೆ (ಫೆ. 19) 10ನೇ ವರ್ಷದ ತುಳುನಾಡಿನ ಕಂಬಳ `ತಿರುವೈಲೋತ್ಸವ' ಜರುಗಲಿದೆ.
ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು,ಗುರುಪುರ ಶ್ರೀ ಕ್ಷೇತ್ರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಮಾಜಿ ಸಚಿವ ಯು ಟಿ ಖಾದರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್, ಶಾಸಕರಾದ ರಾಜೇಶ್ ನಾಯ್ಕ್, ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಮಂಜೇಶ್ವರ ಶಾಸಕ ಅಶ್ರಫ್, ಎಂಎಲ್‍ಸಿಗಳಾದ ಮಂಜುನಾಥ ಭಂಡಾರಿ ಮತ್ತು ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೊೈದಿನ್ ಬಾವ, ಮಾಜಿ ಎಂಎಲ್‍ಸಿ ಐವನ್ ಡಿ'ಸೋಜ, ಕಾಂಗ್ರೆಸ್ ಮುಖಂಡ ಮಿಥುನ್ ರೈ, ಉದ್ಯಮಿ ನರ್ಸರಾಜು ಬಾಲಕೃಷ್ಣ ಮತ್ತಿತರ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿರುವೈಲುಗುತ್ತು ಕಂಬಳ ಸ್ಥಾಪಕರಾದ ನವೀನ್‍ಚಂದ್ರ ಆಳ್ವ ತಿರುವೈಲುಗುತ್ತು ತಿಳಿಸಿದ್ದಾರೆ.
Kshetra Samachara
18/02/2022 04:52 pm