ಮಂಗಳೂರು:ಜಿಲ್ಲಾ ಪಂಚಾಯತ್ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳ ಅನುಕೂಲಕ್ಕಾಗಿ ಅವರ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲು ಅನುಕೂಲಕ್ಕಾಗಿ ರಾಜ್ಯ ಸರಕಾರದ ಶಿಶು ಪಾಲನಾ ಕೇಂದ್ರ ಹಾಗೂ ಮಹಿಳಾ ವಿಶ್ರಾಂತಿ ಕೋಣೆಯನ್ನು ದ.ಕ. ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು ಮಕ್ಕಳ ಕೈಯಿಂದಲೇ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು, ಮೇಯರ್, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
19/02/2022 05:38 pm