ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪೆರಾರ:ಸೇತುವೆ,ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

ಬಜಪೆ:ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಅಳಿಕೆ ರಾಜು ಶೆಟ್ಟಿಯವರ ಜಮೀನಿನ ಬಳಿ ನಂದಿನಿ ಉಪನದಿಗೆ ಅಡ್ಡವಾಗಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕ ಭರತ್ ಶೆಟ್ಟಿ ಅವರು ಈ ಭಾಗದ ಜನರ ಬಹುಕಾಲದ ಬೇಡಿಕೆ ಇದಾಗಿದ್ದು, ಈ ವರ್ಷದ ಪಶ್ಚಿಮ ವಾಹಿನಿ ಯೋಜನೆಯಡಿ ಸರಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಅದಕ್ಕಾಗಿ ತಮ್ಮ ಮನವಿಯನ್ನು ಪರಿಗಣಿಸಿ ಈ ಮಹತ್ವಪೂರ್ಣ ಯೋಜನೆಗೆ ಸಹಕರಿಸಿದ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಈ ಸಂದರ್ಭ ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷೆ ಸೇಸಮ್ಮ, ಸ್ಥಳೀಯ ಮುಖಂಡರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/03/2022 04:09 pm

Cinque Terre

906

Cinque Terre

0

ಸಂಬಂಧಿತ ಸುದ್ದಿ