ಬಜಪೆ:ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೊಂದಾದ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಕಂದಾವರ ಗ್ರಾಮದಲ್ಲಿ ಇಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಾಲನೆ ನೀಡಿದರು. ಅರ್ಹ ಫಲಾನುಭವಿಗಳಿಗೆ ಶಾಸಕರು ಕಂದಾಯ ದಾಖಲೆಗಳನ್ನು ವಿತರಿಸಿದರು.
ಈ ಸಂದರ್ಭ ಮಂಗಳೂರು ತಾಲ್ಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಉಪ ತಹಶೀಲ್ದಾರ್ ಶಿವಪ್ರಸಾದ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್, ಉಪಾಧ್ಯಕ್ಷೆ ಚಂದ್ರಿಕಾ,ಕಂದಾಯ ನಿರೀಕ್ಷಕರು, ಪಂಚಾಯತ್ ಸದಸ್ಯರು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಹಾಜರಿದ್ದರು.
Kshetra Samachara
12/03/2022 02:18 pm