ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿಕಾರಿಗಳು ಕೆಲಸ ಮಾಡದಿದ್ದರೆ ನನ್ನ ಕಚೇರಿಗೆ ಮಾಹಿತಿ ನೀಡಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಅಧಿಕಾರಿಗಳು ಕೆಲಸ ಮಾಡದಿದ್ದರೆ ನನ್ನ ಕಚೇರಿಗೆ ಮಾಹಿತಿ ನೀಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ತಹಸೀಲ್ದಾರ್ ಗ್ರಾಮವಾಸ್ತವ್ಯ ಕಾರ್ಯಕ್ರಮ ಬಡಗಬೆಳ್ಳೂರಿನಲ್ಲಿ ಶನಿವಾರ ನಡೆಯಿತು. ಈ ಸಂದರ್ಭ ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಡಗಬೆಳ್ಳೂರಿನಲ್ಲಿ 94ಸಿ ಸಮಸ್ಯೆ ಪರಿಹಾರದ ಹಂತದಲ್ಲಿದೆ ಎಂದರು., ಅಧಿಕಾರಿಗಳು ಕೆಲಸ ಮಾಡದೇ ಇದ್ದರೆ ತನ್ನ ಕಚೇರಿಗೆ ಮಾಹಿತಿ ನೀಡಿ. ಹತ್ತಾರು ಬಾರಿ ತಾಲೂಕಾಫೀಸಿಗೆ ಅಲೆದಾಡುವ ಅಗತ್ಯವಿಲ್ಲ ಎಂದರು.

ಬಂಟ್ವಾಳ ತಾಲೂಕಿನ ಐದು ಕಡೆಗಳಲ್ಲಿ ಗ್ರಾಮವಾಸ್ತವ್ಯ ಮಾಡಿದ್ದೇವೆ, ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಿ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಈ ಸಂದರ್ಭ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ ಪ್ರಕಾಶ್ ಆಳ್ವ, ಉಪಾಧ್ಯಕ್ಷೆ ಮಮತಾ,

ಪಿಡಿಒ, ಗ್ರೇಡ್ 2 ತಹಶೀಲ್ದಾರ್ ಕವಿತಾ, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಮಿತ್ತೂರು, ಉಪತಹಸೀಲ್ದಾರ್ ನವೀನ್ ಬೆಂಜನಪದವು, ಕಂದಾಯ ನಿರೀಕ್ಷಕ‌ ವಿಜಯ ಆರ್ ,ಪ್ರಥಮ ದರ್ಜೆ ಸಹಾಯಕಿ ಗ್ರೆಟ್ಟಾ ಮಸ್ಕರೇನ್ಹಸ್, ತಾಲೂಕು ಆಡಳಿತ ಶಾಖೆಯ ವಿಷಯ ನಿರ್ವಾಹಕ, ಸೀತಾರಾಮ ಕಮ್ಮಾಜೆ, ದ್ವಿತೀಯ ದರ್ಜೆ ಸಹಾಯಕರಾದ ವಿನೋದ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಪ್ರಶಾಂತ್ ಅಶ್ವಿನಿ ,ಆಥಿಕ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/03/2022 11:06 am

Cinque Terre

3.91 K

Cinque Terre

0

ಸಂಬಂಧಿತ ಸುದ್ದಿ