ಬಜಪೆ:ಉಳಾಯಿಬೆಟ್ಟು ಗ್ರಾಮ ಪಂಚಾಯತ್ ನ 2021 -22 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ ನಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ನ ಪಲ್ಗುಣೆ ಸಮುದಾಯ ಭವನದಲ್ಲಿ ನಡೆಯಿತು.ಸಭೆಯಲ್ಲಿ ಕೃಷಿ ಇಲಾಖೆ,ತೋಟಗಾರಿಕೆ ಇಲಾಖೆ ಹಾಗೂ ಹೈನುಗಾರಿಕೆ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದರಿಂದ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.ಮುಂದಿನ ಗ್ರಾಮಸಭೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ನೋಡಿಕೊಳ್ಳಲಾಗುವುದು ಎಂದು ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ ಅವರು ಭರವಸೆ ನೀಡಿದರು.ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಇಲಾಖೆಗಳ ಬಗ್ಗೆ ಮಾಹಿತಿಗಳನ್ನು ಗ್ರಾಮಸ್ಥರಿಗೆ ನೀಡಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಬಿಇಒ ಶಿವಶಂಕರ್, ಪಂಚಾಯತ್‍ರಾಜ್ ಇಂಜಿನಿಯರ್ ಇಲಾಖೆಯ ಪ್ರದೀಪ್, ಮಕ್ಕಳು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಉಳಾಯಿಬೆಟ್ಟು ಮೇಲ್ವಿಚಾರಕಿ ಶಾಲಿನಿ, ಗ್ರಾಮ ಕರಣಿಕ(ವಿಎ) ದಿನೇಶ್, ನೋಡೆಲ್ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್, ಉಪಾಧ್ಯಕ್ಷೆ ರತ್ನಾ, ಆಶಾ, ಆರೋಗ್ಯ ಅಂಗನವಾಡಿ ಕಾರ್ಯಕರ್ತೆಯರು,ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು , ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
31/03/2022 09:37 pm