ಕಾವೂರು:ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನಾಚರಣೆಯ ಅಂಗವಾಗಿ ಕಾವೂರು ಬಿಜೆಪಿ ಕಾರ್ಯಾಲಯದಿಂದ ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದವರೆಗೆ (ಕಾವೂರು ಸೊಸೈಟಿ) ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ನಂತರ ಸೊಸೈಟಿ ಸಭಾಂಗಣದಲ್ಲಿ ಎಲ್ಇಡಿ ಪರದೆಯ ಮೂಲಕ ಮಾನ್ಯ ಪ್ರಧಾನಮಂತ್ರಿಯವರು ಸ್ಥಾಪನ ದಿನದ ಅಂಗವಾಗಿ ಮಾಡಿದ ಭಾಷಣದ ನೇರ ಪ್ರಸಾರವನ್ನು ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು.
ಈ ಸಂದರ್ಭ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪದಾಧಿಕಾರಿಗಳು, ಉತ್ತರ ಮಂಡಲ ಪದಾಧಿಕಾರಿಗಳು, ಸದಸ್ಯರುಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು,ಮಹಾಶಕ್ತಿ ಕೇಂದ್ರದ ಅಧ್ಯಕ್ಷರು - ಕಾರ್ಯದರ್ಶಿಗಳು ಮತ್ತು ಸದಸ್ಯರುಗಳು, ಶಕ್ತಿಕೇಂದ್ರದ ಪ್ರಮುಖರು, ಪ್ರಕೋಷ್ಠಗಳ ಸಂಚಾಲಕರು - ಸಹ ಸಂಚಾಲಕರು ಮತ್ತು ಸದಸ್ಯರು ಹಾಗೂ ಪಕ್ಷದ ಪ್ರಮುಖರುಗಳು ಮತ್ತು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
Kshetra Samachara
06/04/2022 12:38 pm