ಬಜಪೆ:ಕೊಳಂಬೆ ಗ್ರಾಮದ ಸುರಭಿಕಟ್ಟೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ ರಂಗಪೂಜೆಯು ಜರುಗಿತು.ಈ ಸಂದರ್ಭ ದೇವಳದ ಆಡಳಿತ ಮಂಡಳಿಯ ಪ್ರಮುಖರು, ಉಪಸ್ಥಿತರಿದ್ದರು.
ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ಶೆಟ್ಟಿ, ಅದ್ಯಪಾಡಿ-ದೈವಂಗಳ ಗುಡ್ಡೆ ಶ್ರೀ ನೀಲಕಂಠ ಉಮಾಮಹೇಶ್ವರ ದೇವಳದ ಆಡಳಿತ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Kshetra Samachara
10/04/2022 08:32 pm