ಬಜಪೆ: ಭಾರತೀಯ ಜನತಾ ಪಾರ್ಟಿ ಎಕ್ಕಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಎಕ್ಕಾರು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಸುಂದರ್ ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಕುಕ್ಯಾನ್, ಕಾರ್ಯದರ್ಶಿ ಸುದೀಪ್ ಅಮೀನ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
11/04/2022 02:36 pm