ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪೆರಾರ: ನಂದಿನಿ ಉಪನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟಿನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ

ಬಜಪೆ: ರಾಜ್ಯ ಸರಕಾರ ಪಶ್ಚಿಮ ವಾಹಿನಿ ಯೋಜನೆಯಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ವಿವಿದೆಡೆ ನಮ್ಮ ಮನವಿಯ ಮೇರೆಗೆ ಮುಖ್ಯಮಂತ್ರಿಗಳು ಅನುದಾನ ನೀಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಹೇಳಿದರು.ಅವರು 165 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ಕೊಳಪಿಲದ ಬಳಿ ನಂದಿನಿ ಉಪನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟಿನ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭ ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷೆ ಸೇಸಮ್ಮ, ಸದಸ್ಯರುಗಳಾದ ದೇವಪ್ಪ ಶೆಟ್ಟಿ, ಮೀನಾಕ್ಷಿ, ಗಣೇಶ್, ಯಶವಂತ ಪೂಜಾರಿ, ಸುಜಾತ, ವಿನೋದ್, ಗಣೇಶ್ ಬಿ. ಸ್, ವನಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/04/2022 01:31 pm

Cinque Terre

338

Cinque Terre

0

ಸಂಬಂಧಿತ ಸುದ್ದಿ