ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರವೂರು:ನದಿ ನೀರು ಕಲುಷಿತ - ಅಧಿಕಾರಿಗಳ ತಂಡದಿಂದ ಪರಿಶೀಲನೆ

ಬಜಪೆ:ಮರವೂರು ಪಲ್ಗುಣೆ ನದಿಯ ಸೇತುವೆಯಿಂದ ಅನತಿ ದೂರದ ಪೇಜಾವರ ಮಠದ ಸಮೀಪ ನದಿ ನೀರು ಕಲುಷಿತಗೊಂಡಿದ್ದು,ಭಾರೀ ಪ್ರಮಾಣದಲ್ಲಿ ಮೀನುಗಳು ಸಾವಿಗೀಡಾಗಿದೆ.ಕೈಗಾರಿಕಾ ವಲಯದಿಂದ ಆಕ್ರಮವಾಗಿ ರಾಸಯನಿಕ ವಿಷ ಮಿಶ್ರಿತ ನೀರನ್ನು ನದಿಗೆ ಬಿಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ.ನೀರಿನ ಗುಣಮಟ್ಟದ ಪರೀಕ್ಷೆಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸ್ಯಾಂಪಲ್ ನ್ನು ಸಂಗ್ರಹಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಪರಿಸರದಲ್ಲಿ ಮೀನುಗಳು ಹೆಚ್ಚಿನ ಪ್ರಮಾಣದಲ್ಲಿ ಸಾವಿಗೀಡಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಸ್ಥಳಕ್ಕೆ ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪೂರ್ಣಕಲಾ ವೈ.ಕೆ,ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಕೀರ್ತಿಕುಮಾರ್,ಜೋಕಟ್ಟೆ ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿ ಹಾಗೂ ಪ್ರಮುಖರ ತಂಡವು ಪರಿಸರದಲ್ಲಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/04/2022 01:07 pm

Cinque Terre

842

Cinque Terre

1

ಸಂಬಂಧಿತ ಸುದ್ದಿ