ಬಜಪೆ:5 ಕೋಟಿ ರೂಪಾಯಿ ಅನುದಾನದಲ್ಲಿ ಸುರತ್ಕಲ್-ಕಬಕ ರಾಜ್ಯ ಹೆದ್ದಾರಿಯ ಗುರುಪುರ ಕೈಕಂಬ ಪೊಳಲಿ ದ್ವಾರದಿಂದ ಅಡ್ಡೂರು ಸೇತುವೆವರೆಗೆ ನಡೆಯಲಿರುವ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಇಂದು ಶಿಲಾನ್ಯಾಸ ನೆರವೇರಿಸಿ ಮಾಧ್ಯಮದೊಂದಿಗೆ ಮಾತನಾಡಿದರು.
ಈ ಸಂದರ್ಭ ಗುರುಪುರ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಜಿ. ಎಂ ಉದಯ ಭಟ್, ಸುನಿಲ್ ಜಲ್ಲಿಗುಡ್ಡೆ, ಸಚಿನ್ ಅಡಪ, ಹರೀಶ್ ಬಳ್ಳಿ, ಶಶಿಕಲಾ, ಛಾಯಾ, ಮುಖಂಡ ಸೋಹನ್ ಅತಿಕಾರಿ, ಚಂದ್ರಹಾಸ ಶೆಟ್ಟಿ ನಾರಳ, ಶ್ರೀಕರ ಶೆಟ್ಟಿ, ಸಂದೀಪ್, ಜಿ. ಕೆ ಸಂದೇಶ್, ಸೇಸಮ್ಮ, ಗಂಜಿಮಠ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಕಂದಾವರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಹಾಗೂ ಪ್ರಮುಖರು ಹಾಜರಿದ್ದರು.
Kshetra Samachara
10/05/2022 05:18 pm