ಬಂಟ್ವಾಳ: ರಾಜ್ಯದಾದ್ಯಂತ 1 ಸಾವಿರ ಚಾರ್ಜಿಂಗ್ ಸೆಂಟರ್ ಅಭಿಯಾನಕ್ಕೆ ಜೂನ್ ನಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲೆಕ್ಟ್ರಿಕ್ ವಾಹನಗಳಿಗಾಗಿ ಜೂನ್ ಮೊದಲನೇ ವಾರದಲ್ಲಿ ವಿದ್ಯುತ್ ಚಾರ್ಜಿಂಗ್ ಸೆಂಟರ್ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಮೈಸೂರಿನಲ್ಲಿ ಇದಕ್ಕೆ ಸಂಬಂಧಿಸಿ ಕೆಲಸ ಆರಂಭಗೊಂಡಿದೆ. ಒಂದು ಸಾವಿರ ಚಾರ್ಜಿಂಗ್ ಸೆಂಟರ್ ಅನ್ನು ಆರಂಭಿಕವಾಗಿ ಪ್ರಾರಂಭಿಸುವ ಗುರಿ ಇದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
Kshetra Samachara
17/05/2022 07:12 pm