ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಕ್ಕಾರು:ಕಾಯ್ದಂಡ ಯುವಕ ಮಂಡಲದ ವತಿಯಿಂದ ಉಚಿತ ಪುಸ್ತಕ ವಿತರಣೆ

ಬಜಪೆ:ದಶಮ ಸಂಭ್ರಮವನ್ನು ಆಚರಿಸಿ ಹನ್ನೊಂದನೇ ವರುಷಕ್ಕೆ ಪಾದಾರ್ಪಣೆಗೈಯುತ್ತಿರುವ ಕಾಯ್ದಂಡ ಯುವಕ ಮಂಡಲ ( ರಿ) ಎಕ್ಕಾರು, ತನ್ನ ಸಾಮಾಜಿಕ ಕಾರ್ಯಕ್ರಮಗಳ ಅಂಗವಾಗಿ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಡಗ ಎಕ್ಕಾರು ಇಲ್ಲಿನ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷದ ಪೂರ್ತಿ ಪುಸ್ತಕ ವನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಎಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ರೈ , ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಶೆಟ್ಟಿ , ಅನಿಲ್ ಕುಲಾಲ್ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾಗೇಶ್ , ಕಾಯ್ದಂಡ ಯುವಕ ಮಂಡಲದ ಅಧ್ಯಕ್ಷ ಶಿವಾನಂದ ಜೆ ಶೆಟ್ಟಿ , ಯುವಕ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಪೂಜಾರಿ , ಯುವಕ ಮಂಡಲ ದ ಮಾಜಿ ಅಧ್ಯಕ್ಷ ಸೀತಾರಾಮ್ ಬಂಗೇರ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/05/2022 01:02 pm

Cinque Terre

624

Cinque Terre

0

ಸಂಬಂಧಿತ ಸುದ್ದಿ