ಮಂಗಳೂರು:ಮಂಗಳೂರು ನಗರ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಲಿರುವ ಒಂದು ದಿನದ ಮಾಹಿತಿ - ನೊಂದಣಿ ಶಿಬಿರದ ಆಯೋಜನೆ ಬಗ್ಗೆ ಶಾಸಕ ಡಾ.ಭರತ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ವಿವಿಧ ಇಲಾಖೆಗಳಿಂದ ನಾಗರಿಕರಿಗೆ ಸಿಗುವ ಸೌಲಭ್ಯಗಳು, ನೀಡಬೇಕಾಗಿರುವ ಮಾಹಿತಿಯ ಬಗ್ಗೆ ಶಾಸಕರು ಸಮಾಲೋಚನೆ ನಡೆಸಿದರು.
ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಪ ತಹಶಿಲ್ದಾರರು ಸುರತ್ಕಲ್ ಹೋಬಳಿ), ಮೀನುಗಾರಿಕಾ ಸಹಾಯಕ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ, ಕಾರ್ಮಿಕ ಇಲಾಖೆ ,ಲೀಡ್ ಬ್ಯಾಂಕ್ ಮ್ಯಾನೇಜರ್ ಸಹಿತ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
07/06/2022 04:28 pm