ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಕ್ಕಾರು ವಿಜಯ ಯುವ ಸಂಗಮದ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಬೋಲೋಡಿ ಆಯ್ಕೆ

ಬಜಪೆ:ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯ ಯುವ ಸಂಗಮ (ರಿ ) ಎಕ್ಕಾರು ಸಂಸ್ಥೆಯ 26 ನೇ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಆದರ್ಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬಡಕರೆ ಶ್ರೀ ಜಾರಂದಾಯ ದೈವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ವಾರ್ಷಿಕ ಲೆಕ್ಕ ಪತ್ರವನ್ನು ಪ್ರಧಾನ ಕಾರ್ಯದರ್ಶಿ ಚೇತನ್ ಶೆಟ್ಟಿಯವರು ಮಂಡಿಸಿದರು. 25 ನೇ ವರ್ಷದ ಯಶಸ್ವಿ ಕಾರ್ಯಕ್ರಮಕ್ಕೆ ಸಹಕರಿಸಿದ ಸರ್ವರಿಗೂ ಅಧ್ಯಕ್ಷ ಆದರ್ಶ್ ಶೆಟ್ಟಿ ಅವರು ಅಭಿನಂದನೆಯನ್ನು ಸಲ್ಲಿಸಿದರು.ಈ ಸಂದರ್ಭ 26 ನೇ ವರ್ಷಕ್ಕೆ ನೂತನ ಸಮಿತಿ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಎಕ್ಕಾರು, ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಬೋಲೋಡಿ,ಉಪಾಧ್ಯಕ್ಷರಾಗಿ.ಸಾಗರ್ ಶೆಟ್ಟಿ,

ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಕೆ. ಎಮ್,ಜೊತೆ ಕಾರ್ಯದರ್ಶಿಯಾಗಿ ಪವನ್ ಶೆಟ್ಟಿ,ಕೋಶಾಧಿಕಾರಿಯಾಗಿ ರೋಯಲ್ ಮಿಸ್ಕಿತ್,

ಜೊತೆ ಕೋಶಾಧಿಕಾರಿಯಾಗಿ ಲೋಕೇಶ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಮಾಡ,ಕ್ರೀಡಾ ಕಪ್ತಾನರಾಗಿ ವಿನೋದ್ ಶೆಟ್ಟಿ ಸಂಕೇಶ,ಜೊತೆ ಕ್ರೀಡಾ ಕಪ್ತಾನರಾಗಿ ನಿತೇಶ್ ಶೆಟ್ಟಿ ಎಕ್ಕಾರ್,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ,ಸಂಘಟನಾ ಕಾರ್ಯದರ್ಶಿಯಾಗಿ ಮನೀಶ್ ಶೆಟ್ಟಿ ಆಯ್ಕೆಯಾದರು.

Edited By : PublicNext Desk
Kshetra Samachara

Kshetra Samachara

08/06/2022 09:03 pm

Cinque Terre

1.35 K

Cinque Terre

0

ಸಂಬಂಧಿತ ಸುದ್ದಿ