ಬಜಪೆ : ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ(ಎನ್ನೆಸ್ಸೆಸ್) ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಶಿಬಿರವು ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು. ಶಿಬಿರದಲ್ಲಿ ವಿದ್ಯಾರ್ಥಿಗಳು ಪರಿಸರ ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ಜೂನ್ 2ರಿಂದ 8ರವರೆಗೆ `ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ' ಎಂಬ ಶೀರ್ಷಿಕೆಯಡಿ ನಡೆಯುತ್ತಿರುವ ಈ ಶಿಬಿರದಲ್ಲಿ ಕಾಲೇಜಿನ 50 ವಿದ್ಯಾರ್ಥಿಗಳು ಪಾಲ್ಗೊಂಡರು.
ಎನ್ನೆಸ್ಸೆಸ್ ಯೋಜನಾಧಿಕಾರಿ ಯತೀನ್ ಅಂಚನ್ ಮುಂದಾಳತ್ವದಲ್ಲಿ ಶಿಬಿರವು ನಡೆಯಿತು. ವಿದ್ಯಾರ್ಥಿಗಳು ಪಂಚಾಯತ್ ಆವರಣ, ಸುತ್ತಲ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿರುವುದಲ್ಲದೆ, ತೋಡುಗಳಲ್ಲಿ ತುಂಬಿರುವ ಹೂಳು ಹಾಗೂ ತ್ಯಾಜ್ಯ ತೆರವುಗೊಳಿಸಿದ್ದಾರೆ. ಶಿಬಿರಾರ್ಥಿಗಳು ಇಂದು ಎಡಪದವು ಪರಿಸರದಲ್ಲಿ ಪರಿಸರ ಸಂರಕ್ಷಣೆ ವಿಷಯದಲ್ಲಿ ಜಾಥಾ ನಡೆಸಿದರು.ನಾಳೆ (ಜೂ. 8ರಂದು) ಪಂಚಾಯತ್ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
Kshetra Samachara
08/06/2022 10:21 pm