ಮಗಳೂರು:ಪ್ರಧಾನಿ ಮೋದಿಜಿಯವರ ಆಡಳಿತದ 8 ನೇ ವರ್ಷಾಚರಣೆ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ನಗರ ಬಡವರ ಕಲ್ಯಾಣ ವಿಭಾಗದ ವತಿಯಿಂದ ಪದವಿನಂಗಡಿ ಬೆನಕ ಸಭಾಭವನದಲ್ಲಿ ಉಚಿತ ಇ-ಶ್ರಮ ಕಾರ್ಡ್, ಅಯುಷ್ಮಾನ್ ಕಾರ್ಡ್, ಕಾರ್ಮಿಕ ಕಾರ್ಡ್ ಹಾಗೂ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ ನಡೆಯಿತು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮೋದಿಜಿ ಯೋಜನೆಗಳು ಅಂತ್ಯೋದಯ ಕಲ್ಪನೆಯಲ್ಲಿ ಸಮಾಜದ ಕಟ್ಟ ಕಡೆ ವ್ಯಕ್ತಿಗಳಿಗೆ ಮುಟ್ಟುವಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಶಾಸಕರು ಶುಭ ಹಾರೈಸಿದರು.
ಈ ಸಂದರ್ಭ ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಬೊಂದೇಲ್, ಉಪ ಮಹಾಪೌರರಾದ ಸುಮಂಗಲಾ ರಾವ್, ಮಹಾ ನಗರ ಪಾಲಿಕೆ ಸದಸ್ಯರಾದ ಸಂಗೀತ ನಾಯಕ್, ಪಾಲಿಕೆ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತಿದ್ದರು.
Kshetra Samachara
12/06/2022 04:02 pm