ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫಲಾನುಭವಿಗಳ ಸಮಾವೇಶ,ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು:ಮಂಗಳೂರು ಉತ್ತರ ಮಂಡಲದ ಎಸ್ ಸಿ ಮೋರ್ಚಾ ವತಿಯಿಂದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿಯವರ ಸರಕಾರದ 8 ನೇ ವರ್ಷದ ಆಡಳಿತದ ಸಂಭ್ರಮದ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳ ಸಮಾವೇಶ, SSLC ಪರೀಕ್ಷೆಯಲ್ಲಿ ಪ್ರಥಮ ಮತ್ತು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅವರು ಭಾಗವಹಿಸಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

SC ಮೋರ್ಚಾದ ಜಿಲ್ಲಾಧ್ಯಕ್ಷ ವಿನಯನೇತ್ರ, ಉತ್ತರ ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಪ್ರ.ಕಾಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಎಸ್ ಸಿ ಮೋರ್ಚಾದ ಅಧ್ಯಕ್ಷ ಆನಂದ್ ಪಾಂಗಾಳ, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/06/2022 05:59 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ