ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಭಾಗವಹಿಸಿದರು.
ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮೇಯರ್, ಉಪಮೇಯರ್, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
13/06/2022 03:31 pm