ಮಂಗಳೂರು: ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದೀಜಿ ಅವರ ನೇತೃತ್ವದ ಕೇಂದ್ರ ಸರಕಾರ 8ವರ್ಷಗಳನ್ನು ಪೂರ್ಣಗೊಳಿಸಿರುವ ಸುಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಅಂಗವಾಗಿ ಎ.ಜೆ ಹಾಸ್ಪಿಟಲ್ & ರಿಸರ್ಚ್ ಸೆಂಟರ್ ಕುಂಟಿಕಾನ, ಮಂಗಳೂರು ಇದರ ಸಹಯೋಗದೊಂದಿಗೆ ಮೂಡುಬಿದಿರೆ ಕನ್ನಡಭವನದಲ್ಲಿ ಜರಗಿದ ರಕ್ತದಾನ ಶಿಬಿರವನ್ನು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಉದ್ಘಾಟಿಸಿದರು.
ಈ ಸಂಧರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ,ಮಂಡಲಾಧ್ಯಕ್ಷ ಸುನೀಲ್ ಆಳ್ವ, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಸುಕೇಶ್ ಶೆಟ್ಟಿ , ಬಾಹುಬಲಿ ಪ್ರಸಾದ್, ವಿನೋದ್ ಬೆಳ್ಳಯಾರು, ನಾಗರಾಜ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ, ಆಸ್ಪತ್ರೆಯ ವೈದರು ಹಾಗೂ ಸಿಬ್ಬಂದಿ ವರ್ಗ ಹಾಗೂ ಮಂಡಲದ ಪದಾಧಿಕಾರಿಗಳು ಹಾಗೂ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
19/06/2022 12:56 pm