ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ಕೋಟಿ ರೂ ಮಿಕ್ಕಿ ಕಾಮಗಾರಿ ಆಗಿದೆ - ಶಾಸಕ ಭರತ್ ಶೆಟ್ಟಿ

ನೀರುಮಾರ್ಗ:ಈಗಾಗಲೇ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5 ಕೋಟಿ ರೂ ಮಿಕ್ಕಿ ಕಾಮಗಾರಿ ಆಗಿದೆ. ಇನ್ನು ಹಲವು ಕಾಮಗಾರಿ ನಡೆಯಲಿದೆ. ನಗರಕ್ಕೆ ಹತ್ತಿರವಿರುವ ಪ್ರದೇಶ ಆದ ಕಾರಣ ನೀರುಮಾರ್ಗ ಪ್ರದೇಶ ಮುಂದಿನ ದಿನಗಳಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳ ಸಹಿತ ವಿವಿಧ ಅಭಿವೃದ್ಧಿ ಯೋಜನೆಗಳು ಬರಲಿವೆ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ಹೇಳಿದರು.

ಅವರು ಇಂದು ನೀರುಮಾರ್ಗ ಪಂಚಾಯತ್ ನಲ್ಲಿ ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯ 21 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ರೀತಿಯ ಸ್ಪಂದನೆ ನೀಡಬೇಕು ಎಂದು ಶಾಸಕರು ಹೇಳಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಫಲಾನುಭವಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/06/2022 04:33 pm

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ