ಬಜಪೆ: ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕ ಎಕ್ಕಾರು ಹಾಗೂ ಬಡಗ ಎಕ್ಕಾರು ಗ್ರಾಮಗಳಿಗೆ ಸಂಬಂಧಿಸಿದ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಎಕ್ಕಾರು ಗ್ರಾಮ ಪಂಚಾಯತ್ ನ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಮೆಸ್ಕಾಂ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಇಲಾಖೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಗ್ರಾಮಸ್ಥರು ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಸುರೇಖಾ ರೈ ಅವರು ವಹಿಸಿದ್ದರು. ನೋಡಲ್ ಅಧಿಕಾರಿಯಾಗಿ ತಾ.ಪಂ ಇಒ ನಾಗರಾಜ್ ಎನ್.ಜಿ ಭಾಗವಹಿಸಿದ್ದರು.ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷ ಮಾಧವ, ಪಿಡಿಓ ದೀಪಿಕಾ,ಗ್ರಾಮ ಕರಣೆಕ ನಿತಿನ್, ಕಾರ್ಯದರ್ಶಿ ಕಮಲಾಕ್ಷ, ಪಂಚಾಯತ್ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
24/06/2022 04:29 pm