ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮ

ಮಂಗಳೂರು:ದಕ್ಷಿಣಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪತ್ರಕರ್ತರಿಗೆ ಹಣ್ಣು ಹಂಪಲು ಬೀಜ ವಿತರಿಸಿದರು.

ಈ ಸಂದರ್ಭ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಅರಣ್ಯ ಇಲಾಖೆ ಮಂಗಳೂರು ವಲಯದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಮಂಗಳೂರು ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಸ್ವರ್ಣಸುಂದರ್, ಕುದುರೆಮುಖ ಕಬ್ಬಿಣ ಹಾಗೂ ಅದಿರು ಕಂಪನಿ ಮುಖ್ಯ ಪ್ರಬಂಧಕ ರಾಮಕೃಷ್ಣ, ಹಿರಿಯ ಪ್ರಬಂಧಕ ಮುರುಗೇಶ್, ಅರಣ್ಯ ಮಿತ್ರ ಮೋಹನ್ ಉಳ್ಳಾಲ್,

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/06/2022 03:11 pm

Cinque Terre

1.17 K

Cinque Terre

0

ಸಂಬಂಧಿತ ಸುದ್ದಿ