ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರುಪುರ: ಬಂಟರ ಮಾತೃ ಸಂಘದ `ವಾರ್ಷಿಕ ಸಮಾವೇಶ'ದ ಪೂರ್ವಭಾವಿ ಸಭೆ

ಬಜಪೆ: ಜುಲೈ 17ರಂದು ನಡೆಯಲಿರುವ ಗುರುಪುರ ಬಂಟರ ಮಾತೃ ಸಂಘ(ರಿ) ಇದರ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಸಮಾವೇಶದ ಪ್ರಯುಕ್ತ ಗುರುಪುರ ಕುಕ್ಕುದಕಟ್ಟೆಯಲ್ಲಿರುವ ಸಂಘದ ಕಚೇರಿಯಲ್ಲಿ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಒಟ್ಟು ಕಾರ್ಯಕ್ರಮಗಳ ರೂಪುರೇಷೆಯ ಬಗ್ಗೆ ಚರ್ಚೆ ನಡೆಯಿತು.

ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಹೊಸಲಕ್ಕೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರು ಕೆಲವು ಮಹತ್ವದ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಶೆಟ್ಟಿ ಉಪ್ಪುಗೂಡು, ಉಪಾಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ, ಸಂಚಾಲಕ ಚಂದ್ರಹಾಸ ಶೆಟ್ಟಿ ನಾರಳ, ಜೊಎ ಕಾರ್ಯದರ್ಶಿ ಸತ್ಯವಾನ್ ಆಳ್ವ ಮೂಡುಶೆಡ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾಕ್ಷಿ ಪಿ ಶೆಟ್ಟಿ, ಯುವ ವಿಭಾಗ ಅಧ್ಯಕ್ಷ ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಪುರುಷೋತ್ತಮ ಮಲ್ಲಿ, ಸತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷ ರಾಜ್‍ಕುಮಾರ್ ಶೆಟ್ಟಿ ಲಿಂಗಮಾರುಗುತ್ತು, ಸುದರ್ಶನ ಶೆಟ್ಟಿ ಪೆರ್ಮಂಕಿ, ನಳಿನಾಕ್ಷಿ ಶೆಟ್ಟಿ ಗುರುಪುರ, ಜಯರಾಮ ರೈ ಉಳಾಯಿಬೆಟ್ಟು, ಸೋಹನ್ ಅತಿಕಾರಿ ಮತ್ತಿತರರು ಉಪಸ್ಥಿತರಿದ್ದರು. ಕೋಶಾಧಿಕಾರಿ ಜಯರಾಮ ಶೆಟ್ಟಿ ವಿಜೇತ ಕೈಕಂಬ ವಂದಿಸಿದರು.

Edited By : PublicNext Desk
Kshetra Samachara

Kshetra Samachara

12/07/2022 07:26 am

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ