ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ:ಜಿಲ್ಲಾ ತಂಬಾಕು ಕೋಶದಿಂದ ಕಾರ್ಯಾಚರಣೆ ,ಪ್ರಕರಣ ದಾಖಲು

ಬಜಪೆ:ಜಿಲ್ಲಾ ತಂಬಾಕು ಕೋಶದ ವತಿಯಿಂದ ಬಜಪೆ ಪಡುಪೆರಾರ ಹಾಗೂ ಕೊಳಂಬೆ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಯಡಿ (ಕೋಟ್ಪಾ) 15 ಪ್ರಕರಣಗಳನ್ನು ದಾಖಲಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಸಿಗರೇಟ್‌ ಉತ್ಪನ್ನಗಳ ಮಾರಾಟ ಮತ್ತು ಅವುಗಳ ಯಥೇಚ್ಛ ಬಳಕೆಯ ಹಿನ್ನೆಲೆಯಲ್ಲಿ ಕೋಟ್ಪಾ ಕಾಯ್ದೆ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿರ್ಬಂಧಿಸಲಾಗಿದೆ. ಅದನ್ನು ಪರಿಣಾಮಕಾರಿ ಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿ 15 ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 3300 ರೂ ದಂಡ ಹಾಕಿ ಎಚ್ಚರಿಕೆ ನೀಡಲಾಗಿದೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ಕೋಶದ ಸಂಯೋಜಕಿ ಶ್ರುತಿ ಸಾಲ್ಯಾನ್,ಆರೋಗ್ಯ ನಿರೀಕ್ಷಣಾಧಿಕಾರಿ ಗುರುರಾಜ , ಸೌಮ್ಯ ಮತ್ತು ಬಜ್ಪೆ ಪೊಲೀಸ್ ಠಾಣಾ ಸಿಬ್ಬಂದಿ ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

23/07/2022 04:36 pm

Cinque Terre

1.53 K

Cinque Terre

0

ಸಂಬಂಧಿತ ಸುದ್ದಿ