ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿವಿ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಕಾಲೇಜು ಜಂಟಿ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆದ ವಿವಿ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಅತಿಥೇಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಗಳಿಸಿದೆ. ಒಟ್ಟು ಕ್ರೀಡಾಕೂಟದಲ್ಲಿ 19 ನೂತನ ಕೂಟ ದಾಖಲೆ ನಿರ್ಮಾಣಗೊಂಡಿದ್ದು, ಅವುಗಳಲ್ಲಿ ಆಳ್ವಾಸ್ ವಿದ್ಯಾರ್ಥಿಗಳು 13ಕೂಟ ದಾಖಲೆ ನಿರ್ಮಿಸಿರುವುದು ಗಮನಾರ್ಹ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಸತತ 18ನೇ ಬಾರಿಗೆ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಈ ಸಂದರ್ಭದಲ್ಲಿ ಸಮಾರೋಪ ಸಮಾರಂಭದಲ್ಲಿ ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿಹಿಂಪ ಮಂಗಳೂರು ವಿಭಾಗದ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಮಾಜಿ ರಾಷ್ಟ್ರೀಯ ವೈಟ್ ಲಿಫ್ಟರ್ ಪ್ರವೀಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/07/2022 10:55 pm

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ