ಸುಳ್ಯ: ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರ್ಕಾರಿ ಉದ್ಯೋಗವನ್ನು ತತ್ತಕ್ಷಣ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿಗಳಿಗೆ ಮುಲ್ಕಿ-ಮೂಡಬಿದ್ರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಮನವಿ ಮಾಡಿದ್ದಾರೆ.
ನಿನ್ನೆ ಮೃತ ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ಶಾಸಕರು ನಂತರ ಮುಖ್ಯಮಂತ್ರಿಗಳಿಗೆ ತಮ್ಮ ಆಗ್ರಹವನ್ನು ಮಂಡಿಸಿದ್ದಾರೆ. ಪ್ರವೀಣ್ ಹತ್ಯೆಯನ್ನು ತೀವ್ರವಾಗಿ ಖಂಡಿಸುವುದು ಮಾತ್ರವಲ್ಲದೆ ಅವರ ಹತ್ಯೆಯನ್ನು ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಉಗ್ರವಾದ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಅವರ ಪತ್ನಿಗೆ ತತ್ತಕ್ಷಣದಲ್ಲಿ ಸರ್ಕಾರಿ ಉದ್ಯೋಗವನ್ನು ನೀಡಬೇಕು ಎಂದು ಶಾಸಕರು ಆಗ್ರಹಿಸಿದರು.
Kshetra Samachara
31/07/2022 06:51 pm