ಬಂಟ್ವಾಳ: ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂದರ್ಭ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.
ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಅರಳ, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಮತ್ತು ಪ್ರಮುಖ ಮುಖಂಡರಾದ ಸೇಸಪ್ಪ ಬೆದ್ರಕಾಡು, ರಾಜಾ ಚಂಡ್ತಿಮಾರ್, ದಿವಾಕರ ಚಂಡ್ತಿಮಾರ್, ಜಯಪ್ರಕಾಶ ಪುತ್ತೂರು ಮತ್ತು ಕೃಷ್ಣಪ್ಪ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಈ ಅವಮಾನ ನಡೆದಿದ್ದು, ಧ್ವಜಸ್ತಂಭದಲ್ಲಿ ನಿಲ್ಲುವವರ ಕೆಳಗಿನ ಭಾಗದಲ್ಲಿ ಕುರ್ಚಿಯಲ್ಲಿ ಗಾಂಧೀಜಿ, ಅಂಬೇಡ್ಕರ್ ಫೊಟೋಗಳನ್ನು ಇಡಲಾಗಿದ್ದು, ಗೌರವ ನೀಡಲಾಗಿಲ್ಲ ಎಂದು ದೂರಿದ್ದು,ಕೈಗೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿಗೆ ಒತ್ತಾಯಿಸಿದ್ದಾರೆ.
Kshetra Samachara
16/08/2022 07:30 pm