ಮೂಡುಬಿದಿರೆ : ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂಗಳೂರು ಗ್ರಾಮಾಂತರ, ರೋಟರಿ ಕ್ಲಬ್ ಮೂಡುಬಿದಿರೆ ಮತ್ತು ಇನ್ನರ್‌ವೀಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಪೌಷ್ಟಿಕ ಮಕ್ಕಳು ಮತ್ತು ಗರ್ಭಿಣಿಯರ ಅರೋಗ್ಯ ತಪಾಸಣಾ ಶಿಬಿರವು ಮಂಗಳವಾರ ಕನ್ನಡ ಭವನದಲ್ಲಿ ನಡೆಯಿತು.
ರೋಟರಿ ಕ್ಲಬ್‌ನ ಅಧ್ಯಕ್ಷ ಅಧ್ಯಕ್ಷ ಮಹಮ್ಮದ್ ಆರಿಫ್ ಶಿಬಿರವನ್ನು ಉದ್ಘಾಟಿಸಿದರು. ಸಮುದಾಯ ಅರೋಗ್ಯ ಕೇಂದ್ರ ಮೂಲ್ಕಿ ಇದರ ಮಕ್ಕಳ ತಜ್ಞ ಡಾ ಕೃಷ್ಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಪೌಷ್ಠಿಕತೆಗೆ ಕಾರಣ, ಎದೆ ಹಾಲಿನ ಮಹತ್ವ ಬಗ್ಗೆ ಮಾಹಿತಿ ನೀಡಿದರು.
ಪುರಸಭಾ ಸದಸ್ಯ ಪಿ.ಕೆ.ಥೋಮಸ್, ರೋಟರಿ ಕ್ಲಬ್ ಕಾರ್ಯದರ್ಶಿ ಅವಿಲ್ ಡಿಸೋಜಾ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ರಮ್ಯಾ ವಿಕಾಸ್, ಕಾರ್ಯದರ್ಶಿ ಸ್ವಾತಿ ಬೋರ್ಕರ್, ಹಿರಿಯ ಸದಸ್ಯೆ ಜಯಶ್ರೀ ಅಮರನಾಥ ಶೆಟ್ಟಿ, ಮೂಡುಬಿದಿರೆ ಸಮುದಾಯ ಅರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ಚಿತ್ರ, ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ಜಯಂತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅಪೌಷ್ಠಕತೆಯನ್ನು ಹೊಂದಿರುವ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಪೌಷ್ಠಿಕಾಂಶವುಳ್ಳ ಟಾನಿಕ್ ಮತ್ತು ಪೌಡರನ್ನು ವಿತರಿಸಲಾಯಿತು. ಮಂಗಳೂರು ಕೆಎಂಸಿಯ ಕಮ್ಯುನಿಟಿ ಮೆಡಿಸಿನ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ರೋಹಿತ್, ಆರ್‌ಬಿಎಸ್‌ಕೆ ವಿಭಾಗದ ವೈದ್ಯಕೀಯ ತಂಡದ ಡಾ.ದೀಪ್ತಿ ಮತ್ತು ಡಾ.ಖತೀಜ ಮಕ್ಕಳು ಮತ್ತು ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಪ್ರಯೋಗಶಾಲಾ ತಂತ್ರಜ್ಞೆ ಮಮತ ರಕ್ತದ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರದ ಮೇಲ್ವಿಚಾರಕರಾದ ಭಾರತಿ, ಕಾತ್ಯಾಯಿನಿ, ರತಿ, ಕಿರಿಯ ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Kshetra Samachara
16/08/2022 07:39 pm