ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರುಪುರ: ಹೋರಾಟಗಾರ ವೀರ ಸಾವರ್ಕರ್ ಗೆ ಅಪಮಾನ, ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಬಜಪೆ: ಗುರುಪುರ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಭಾವಚಿತ್ರ ಹಿಡಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವಮಾನಿಸಿ, ಶಾಲಾ ಶಿಕ್ಷಕಿಯಿಂದ ಬಲವಂತದ ಕ್ಷಮೆ ಯಾಚಿಸಿದ ಗುರುಪುರ ಪಂಚಾಯತ್‍ನ ಎಸ್‍ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ಸಹಿತ ಅವರಿಗೆ ಪರೋಕ್ಷ ಬೆಂಬಲ ನೀಡಿದ ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಇಂದು ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಾರ್ಯಕರ್ತರು ಗುರುಪುರ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನುದ್ದೇಶಿಸಿ ಮಂಗಳೂರು ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್‍ರಾಜ್ ಕೃಷ್ಣಾಪುರ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಭರತ್‍ರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಸಂದೇಶ್ ಕೊಳದಬದಿ, ಪ್ರಸಾದ್ ಎಡಪದವು, ಹರೀಶ್ ಮಟ್ಟಿ, ಸೋಹನ್ ಅತಿಕಾರಿ, ಚಂದ್ರಹಾಸ ನಾರಳ, ಶೋಧನ್ ಆದ್ಯಪಾಡಿ, ಹರೀಶ್ ಮೂಡುಶೆಡ್ಡೆ, ಸಚಿನ್ ಹೆಗ್ಡೆ ನೀರುಮಾರ್ಗ, ಪ್ರೇಮ್ ಪೊಳಲಿ, ಲಕ್ಷ್ಮಣ್ ಶೆಟ್ಟಿಗಾರ್, ಸುಕುಮಾರ್ ದೇವಾಡಿಗ, ನೋಣಯ್ಯ ಕೋಟ್ಯಾನ್, ಉಮೇಶ್ ಮೂಲ್ಯ, ಸತೀಶ್ ಬಳ್ಳಾಜೆ, ಪ್ರವೀಣ್ ಆಳ್ವ ಗುಂಡ್ಯ, ಶ್ರೀಕರ ಶೆಟ್ಟಿ, ಗುರುಪುರ ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ಸಚಿನ್ ಅಡಪ, ಸುನಿಲ್ ಪೂಜಾರಿ ಜಲ್ಲಿಗುಡ್ಡೆ, ನಳಿನಿ ಶೆಟ್ಟಿ, ಹರೀಶ್ ಬಳ್ಳಿ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರತಿಭಟನಕಾರರು ಪಂಚಾಯತ್‍ಗೆ ಆಗಮಿಸಿದ ಜಿಲ್ಲಾ ಪಂಚಾಯತ್ ಅಧಿಕಾರಿ ಲೋಕನಾಥ್ ಮೂಲಕ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ನೀಡಿ, ಆರೋಪಿ ಸ್ಥಾನದಲ್ಲಿರುವ ಪಂಚಾಯತ್ ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಪಂಚಾಯತ್ ಸುತ್ತ ಭಾರೀ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು.

ಸೋಮವಾರ ಪಂಚಾಯತ್‍ನಲ್ಲಿ ನಡೆದ ಘಟನೆ ವಿರುದ್ಧ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಡಿದ ದೂರಿನನ್ವಯ ಬಜ್ಪೆ ಪೊಲೀಸರು ಪಂಚಾಯತ್‍ನಲ್ಲಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪವೆತ್ತಿ ಸ್ಥಳೀಯ ಶಾಲೆಯ ನೃತ್ಯ ಶಿಕ್ಷಕಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಿ ಸರ್ಕಾರಿ ಕಾರ್ಯಕ್ರಮಕ್ಕೆ ತಡೆಯೊಡ್ಡಿದ ಎಸ್‍ಡಿಪಿಐ ಬೆಂಬಲಿತ ಸದಸ್ಯರಾದ ಎ. ಕೆ. ರಿಯಾಝ್, ಮನ್ಸೂರ್, ಅಶ್ರಫ್, ಶಾಹಿಕ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

16/08/2022 09:14 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ