ಮೂಡುಬಿದಿರೆ: ಭಾರತ್ ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಸಹಯೋಗದಲ್ಲಿ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಸಂಸ್ಥೆಯ ನೂತನ ಕಚೇರಿಯನ್ನು ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಸಾಂಸೃತಿಕ ಜಾಂಬೂರಿಯು ಕೇವಲ ಒಂದು ಸಂಸ್ಥೆಯ ಕೆಲಸವಾಗದೆ ಸರಕಾರದ ಕಾರ್ಯವೆಂದು ಪರಿಗಣಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವುದಾಗಿ ಹೇಳಿದರು. ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಆಯುಕ್ತ ಡಾ. ಎಂ. ಮೋಹನ್ ಆಳ್ವರ ಕಾರ್ಯ ವೈಖರಿಯನ್ನು ಶ್ಲಾಘಿಸಿದ ಅವರು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಡುಬಿದಿರೆ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ, ಸ್ಕೌಟ್ಸ್-ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಆಯುಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಪ್ರತಿಯೊಬ್ಬರು ತಾವು ಮಾಡುವ ಕೆಲಸಗಳಿಗೆ ಬದ್ಧರಾಗಿರಬೇಕು. ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಯೋಜನೆಯ ಹಿಂದೆ ವಿಶ್ವಮಟ್ಟದ ಆಲೋಚನೆಗಳಿರಬೇಕು.
ಈ ಸಂದರ್ಭ ಡಿಸೆಂಬರ್‌ನಲ್ಲಿ ನಡೆಯಲಿರುವ ಸ್ಕೌಟ್ಸ್-ಗೈಡ್ಸ್ ಸಾಂಸ್ಖೃತಿಕ ಜಾಂಬೂರಿಯ ಲೋಗೊ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಕೌಟ್ಸ್-ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂದಿಯಾ, ಏಷ್ಯಾ ಫೆಸಿಫಿಕ್ ರೀಜನ್‌ನ ನಿರ್ದೇಶಕ ಪ್ರಸನ್ನ ಶ್ರೀವತ್ಸವ, ಸ್ಕೌಟ್ಸ್-ಗೈಡ್ಸ್ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ಕೃಷ್ಣಸ್ವಾಮಿ ಆರ್, ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ಅಡೀಶನಲ್ ಇಂಟರ್ನ್ಯಾಷನಲ್ ಕಮಿಷನರ್ ಮಧುಸೂದನ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ, ಉದ್ಯಮಿ ಗಫೂರ್, ಮಹೇಂದ್ರ ವರ್ಮ ಇನ್ನಿತರರು ಉಪಸ್ಥಿತರಿದ್ದರು.
Kshetra Samachara
16/08/2022 09:48 pm