ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕ ಬೈಲಿನಿಂದ ಅಮ್ಮುಂಜೆಗೆ ಸಾಗುವಂತಹ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬಿದ್ದು,ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ರಸ್ತೆಗೆ ಬಿದ್ದಿದೆ.ಘಟನೆಯಿಂದ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಮರದ ತೆರವು ಕಾರ್ಯ ನಡೆದಿದೆ.ತುಂಡಾದ ಕಂಬಗಳನ್ನು ತೆಗೆದು ಹೊಸ ಕಂಬಗಳ ಅಳವಡಿಕೆ ಕಾರ್ಯ ನಡೆದಿದೆ.
Kshetra Samachara
24/08/2022 04:56 pm