ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ಮತ್ತು ಸರಕಾರಿ ಪ್ರೌಢಶಾಲೆ ನೀರ್ಕೆರ ಇವುಗಳ ಸಹಯೋಗದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಅತಿಥೇಯ ನೀರ್ಕೆರೆಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಬಾಲದ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮೂಡುಮಾರ್ನಾಡು ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ದ್ವಿತೀಯ, ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಕಲ್ಲಬೆಟ್ಟುವಿನ ಎಕ್ಸಲೆಂಟ್, ಬಾಲಕಿಯರ ವಿಭಾಗದಲ್ಲಿ ಸರ್ವೋದಯ ಪ್ರೌಢಶಾಲೆ ಕಲ್ಲಮುಂಡ್ಕೂರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಮೂಡುಬಿದಿರೆ ರೋಟರಿ ಕ್ಲಬ್‌ನ್ ಅಧ್ಯಕ್ಷ ಮಹಮ್ಮದ್ ಆರೀಫ್, ರಮೇಶ್ ಬೋಧಿ ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಿದರು.
ಗ್ರಾ.ಪಂ ಉಪಾಧ್ಯಕ್ಷೆ ಸಮಿತಾ, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಪ್ರಭಾರ ಸಮೂಹ ಸಮನ್ವಯ ಅಧಿಕಾರಿ ಸೌಮ್ಯ, ಎಸ್ ಡಿಎಂಸಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಉಪಾಧ್ಯಕ್ಷ ಮಹೇಶ್, ಪ್ರೌಢಶಾಲೆಯ ಮುಖ್ಯಶಿಕ್ಷಕಿ ಡಾ.ಪ್ರತಿಮಾ ಹೆಚ್.ಜಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಯಮುನ, ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೆಲೆನ್, ಪ್ರೌಢಶಾಲೆಯ ದೈ.ಶಿ.ಶಿ. ಸುನಿಲ್ ಮಿರಾಂದ ಮತ್ತು ಪಂಚಾಯತ್ ಸದಸ್ಯರು, ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
26/08/2022 02:32 pm