ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉನ್ನತ ಶಿಕ್ಷಣದಲ್ಲಿ ಸಂಶೋಧನೆಯ ಪಾತ್ರ

ಮೂಡುಬಿದಿರೆ: ಉನ್ನತ ಶಿಕ್ಷಣದಲ್ಲಿ ಸಂಶೋಧನೆಯು ನಮ್ಮಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದರ ಜೊತೆಗೆ ಹೊಸ ವಿಷಯಗಳ ಬಗ್ಗೆ ಅರಿವನ್ನು ಮೂಡಿಸುತ್ತದೆ ಎಂದು ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕುಶಲಪ್ಪ ಎಸ್ ಹೇಳಿದರು.

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಜಂಟಿ ಆಶ್ರಯದಲ್ಲಿ ಉನ್ನತ ಶಿಕ್ಷಣದಲ್ಲಿ ಸಂಶೋಧನೆಯ ಪಾತ್ರ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಏರ್ಪಡಿಸಲಾಗಿತ್ತು. ಸಂಶೋಧನೆಗಳು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಮೂಡಿಬಂದಾಗ ಫಲಿತಾಂಶಗಳು ನಿಖರವಾಗಿ ಲಭಿಸಲು ಸಾಧ್ಯ. ವಿದ್ಯಾರ್ಥಿ ಹಿನ್ನಲೆಯಲ್ಲಿ ಸಂಶೋಧನೆಗೆ ಮಹತ್ವವನ್ನು ನೀಡಿದಾಗ ಮುಂದಿನ ಔದ್ಯೋಗಿಕ ಜೀವನದಲ್ಲಿ ಅದನ್ನು ಮುಂದುವರಿಸಿಕೊಂಡು ಹೋಗಲು ಸಾಧ್ಯ. ಸಂಶೋಧನಾ ಪ್ರಕ್ರಿಯೆಯನ್ನು ಸರಳವಾಗಿ ವಿವರಿಸಿದ ಅವರು, ವಿದ್ಯಾರ್ಥಿಗಳಲ್ಲಿ ಆ ಕ್ಷೇತ್ರದ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಆಳ್ವಾಸ್ ಕಾಲೇಜಿನ ಸಂಶೋಧನಾ ಕೋಶದ ಸಂಯೋಜಕ ಡಾ. ಸುಕೇಶ್, ಸ್ನಾತಕೋತ್ತರ ಎಂಕಾA ವಿಭಾಗದ ಸಂಯೋಜಕಿ ರೇಖಾ ಶೆಟ್ಟಿ, ವಾಣಿಜ್ಯ ವಿಭಾಗದ ಸಂಶೋಧನಾ ಸಂಯೋಜಕಿ ಶಾಲೆಟ್ ರೆಬೆಲ್ಲೋ, ಹಾಗೂ ಎಂಕಾಂ ಹೆಚ್‌ಆರ್‌ಡಿ ವಿಭಾಗದ ಸಂಯೋಜಕಿ ಶಾಜಿಯಾ ಖಾನುಮ್ ಉಪಸ್ಥಿತರಿದ್ದರು.

ಸಂಶೋಧನಾ ಕ್ಷೇತ್ರದಲ್ಲಿ ಈ ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿನಿ ಸಮೀನಾ ಸ್ವಾಗತಿಸಿ, ಲಿಷಲ್ ಕೊರಿಯಾ ಹಾಗೂ ನಾದಿಯಾ ವಂದಿಸಿ, ನಿಖಿತಾ ಪ್ರಾರ್ಥಿಸಿ, ಅನುಷ ಪ್ರಭು ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

05/09/2022 08:42 pm

Cinque Terre

652

Cinque Terre

0

ಸಂಬಂಧಿತ ಸುದ್ದಿ