ಮೂಡುಬಿದಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ದ.ಕ.ಪ.ಪೂ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಹಾಗೂ ಮೂಡುಬಿದಿರೆಯ ಜೈನ್ ಪ.ಪೂ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ 'ಹೊಸ ಶಿಕ್ಷಣ ನೀತಿಯಲ್ಲಿ ರಾಜ್ಯಶಾಸ್ತ್ರದ ವ್ಯಾಪ್ತಿ ಮತ್ತು ಸ್ವರೂಪ'ದ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಜೈನ ಪ.ಪೂ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಹೆತ್ತವರು ತಮ್ಮ ಮಕ್ಕಳು ಎಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಬಯಸುತ್ತಿರುವುದರಿಂದ ರಾಜ್ಯಶಾಸ್ತ್ರ ವಿಭಾಗಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಹಾಗೂ ಉಪನ್ಯಾಸಕರುಗಳಿಗೆ ಸಂಬಳವು ಕಡಿಮೆ ಇದೆ ಇದರಿಂದಾಗಿ ರಾಜ್ಯಶಾಸ್ತ್ರ ಕಾಲೇಜುಗಳನ್ನು ನಡೆಸಲು ಕಷ್ಟಸಾಧ್ಯವಾಗಿದೆ ಆದ್ದರಿಂದ ಅತೀ ಮುಖ್ಯವಾದ ವಿಷಯವಾಗಿರುವ ರಾಜ್ಯಶಾಸ್ತ್ರ ವಿಭಾಗವನ್ನು ಉಳಿಸುವ ಕೆಲಸವನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಮನಸ್ಸು ಮಾಡಬೇಕಾಗಿದೆ ಎಂದು ಹೇಳಿದರು.
ದ.ಕ. ಜಿಲ್ಲಾ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಅಯಣ್ಣ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಉಪನ್ಯಾಸಕರುಗಳಾದ ರಾಮಚಂದ್ರ ರಾವ್ ಮತ್ತು ವಸಂತ ಪಿ.ಎ.ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಿಜೆ ವಿವಿ ಸಂಘದ ಸಂಚಾಲಕ ಕೆ.ಹೇಮರಾಜ್, ದ.ಕ. ಪ.ಪೂ. ಕಾಲೇಜುಗಳ ಪ್ರಾಂಶುಪಾಲರುಗಳ ಸಂಘದ ಅಧ್ಯಕ್ಷ ಕೆ.ಎನ್. ಗಂಗಾಧರ ಆಳ್ವ, ಬೆಂಗಳೂರು ಸರ್ಕಾರಿ ಬಾಲಕಿಯರ ಪ.ಪೂ.ಕಾಲೇಜಿನ ಹಿರಿಯ ರಾಜ್ಯ ಶಾಸ್ತ್ರ ಉಪನ್ಯಾಸಕ ಡಾ.ಎನ್.ಪ್ರಭಾಕರ, ಉಪಾಧ್ಯಕ್ಷ ಎ.ವಿಠಲ್, ಜೈನ ಪ.ಪೂ.ಕಾಲೇಜಿನ ಪ್ರಾಂಶುಪಾಲ ಮಧುಕರ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಮಧುಕರ ಸಾಲಿಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Kshetra Samachara
13/09/2022 07:10 pm