ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಡಪದವು:ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಬಜಪೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು, ಇದರ ಸಂಯುಕ್ತ ಆಶ್ರಯದಲ್ಲಿ ಎಡಪದವಿನ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಮಹಿಳೆಯರ ಮತ್ತು ಪುರುಷರ ವಿಭಾಗದ ಮುಲ್ಕಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವು ನಡೆಯಿತು.

ಪಂದ್ಯಾಟವನ್ನು ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಸುಕುಮಾರ ದೇವಾಡಿಗ ಅವರು ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಕ್ರೀಡಾ ಸಂಯೋಜಕ ಅರುಣ್ ಡಿಸೋಜ, ಎಡಪದವು ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಹಾಗೂ ಉಪನ್ಯಾಸಕ ಪದ್ಮಶೇಖರ್ ಎಂ, ಕಾಲೇಜಿನ ಪ್ರಾಂಶುಪಾಲ ಪದ್ಮನಾಭ ಎಚ್ , ಸಹಶಿಕ್ಷಕ ಸುಬ್ರಹ್ಮಣ್ಯ ಮೊಗೆರಾಯ, ದೈಹಿಕ ಶಿಕ್ಷಣ ಉಪನ್ಯಾಸಕ ಪ್ರೇಮನಾಥ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/09/2022 01:08 pm

Cinque Terre

810

Cinque Terre

0

ಸಂಬಂಧಿತ ಸುದ್ದಿ