ಕುಪ್ಪೆಪದವು: ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ 25% ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ರೀಡಿಂಗ್ ಟೇಬಲನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಂದು ಹಸ್ತಾಂತರಿಸಿದರು.
ಈ ವೇಳೆ ಉಪಾಧ್ಯಕ್ಷರು, ಪಂ.ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು, ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ IEC ಸಂಯೋಜಕರಾದ ಡೊಂಬಯ್ಯ , ಸಾಹಸ್ ನ ಭರತ್, ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Kshetra Samachara
26/09/2022 08:00 pm