ಮಂಗಳೂರು: ಬಿ.ಸಿ. ರೋಡ್- ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದರೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸೋಮವಾರ ಜಿಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ರಸ್ತೆ ತೀರಾ ಹದಗೆಟ್ಟಿದ್ದು, 15 ದಿನಗಳಲ್ಲಿ ಗುಂಡಿ ಮುಚ್ಚುವ ಕೆಲಸ ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.
ಶಾಸಕ ಡಾ. ಭರತ್ ಶೆಟ್ಟಿ, ಶಾಸಕ ಯು.ಟಿ.ಖಾದರ್, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Kshetra Samachara
05/10/2020 11:29 pm